AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’: ನಿಯಮ ಗಾಳಿಗೆ ತೂರಿದ ಎನ್‌ಹೆಚ್‌ಎಐ ವಿರುದ್ಧ ಆಕ್ರೋಶ

‘ಹೆದ್ದಾರಿ ವಿಸ್ತರಣೆಗೆ 2,326 ಮರಗಳಿಗೆ ಕೊಡಲಿ ಪೆಟ್ಟು’: ನಿಯಮ ಗಾಳಿಗೆ ತೂರಿದ ಎನ್‌ಹೆಚ್‌ಎಐ ವಿರುದ್ಧ ಆಕ್ರೋಶ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 05, 2026 | 4:39 PM

Share

ಚಿಕ್ಕಮಗಳೂರು ಸಮೀಪದ ಶಿರುಗುಂದದಿಂದ ಮೂಡಿಗೆರೆವರೆಗಿನ 23 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ 2326 ಮರಗಳ ಕಡಿತಲೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗ್ರೀನ್ ಹೈವೇ ಪಾಲಿಸಿ ಮತ್ತು ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಚಿಕ್ಕಮಗಳೂರು, ಅ.5: ಜಿಲ್ಲೆಯ  ಸಮೀಪದ ಶಿರುಗುಂದದಿಂದ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ವರೆಗಿನ 23 ಕಿಲೋಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ 173ರ ಅಗಲೀಕರಣ ಕಾಮಗಾರಿಗಾಗಿ 2326 ಮರಗಳನ್ನು ಕಡಿಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಯೋಜನೆಗೆ 40 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ನೂರಾರು ಮರಗಳನ್ನು ಕಡಿಯಲಾಗಿದ್ದು, ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಗ್ರೀನ್ ಹೈವೇ ನೀತಿಯನ್ನು ಹಾಗೂ ಅರಣ್ಯ ಇಲಾಖೆಯ ಫಾರೆಸ್ಟ್ ಕ್ಲಿಯರೆನ್ಸ್ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ. ಒಂದು ಮರ ಕಡಿದರೆ ನೂರು ಮರ ನೆಡಬೇಕು ಎಂಬ ನಿಯಮವಿದ್ದರೂ, ಅದನ್ನು ಪಾಲಿಸಿಲ್ಲ. ಅಲ್ಲದೆ, ಸಾರ್ವಜನಿಕರ ಅಹವಾಲನ್ನೂ ಕೇಳದೆ ಕಾಮಗಾರಿ ಪ್ರಾರಂಭಿಸಲಾಗಿದೆ. ಪರಿಸರಾಸಕ್ತರು, ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರು ಈ ಕುರಿತು ಅರಣ್ಯ ಇಲಾಖೆಗೆ ಸಾವಿರಾರು ಆಕ್ಷೇಪಣೆ ಇ-ಮೇಲ್‌ಗಳನ್ನು ಸಲ್ಲಿಸಿದ್ದಾರೆ. ಸಾರ್ವಜನಿಕ ಒತ್ತಡದಿಂದಾಗಿ ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More