ಲೋಕಸಭಾ ಚುನಾವಣೆ: ಬಿಜೆಪಿ ಬಗ್ಗೆ ಅಚ್ಚರಿಯ ಕಾರ್ಣಿಕ ನುಡಿದ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ
Jiganehalli Mailaralingeshwara Karanika: ಲೋಕಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಇಂಥ ಸಂದರ್ಭದಲ್ಲೇ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಯವರಿಗೆ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ ಖುಷಿ ಕೊಡುವಂತಿದೆ. ಮತ್ತೆ ಕಮಲ ಅರಳಲಿದೆ, ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿರಲಿದೆ ಎಂಬರ್ಥದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ 26: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ (Jiganehalli Mailaralingeshwara Karanika) ನುಡಿದಿದ್ದಾರೆ. ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿಯನ್ನೂ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಈ ಭಾಗದಲ್ಲಿ ಬಹಳ ಪ್ರಸಿದ್ಧಿ ಪಡೆದಿದೆ.
‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಮತ್ತೆ ಕಮಲ ಪಕ್ಷ ಅರಳುವುದು ನಿಶ್ಚಿತ ಎಂಬುದೇ ಇದರ ಅರ್ಥವೆಂದು ಭಕ್ತರು ವ್ಯಾಖ್ಯಾನಿಸಿದ್ದಾರೆ. ಕಾರ್ಣಿಕ ನುಡಿಗೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಮೊದಲೇ ಆತಂಕದಲ್ಲಿರುವ ಕಾಂಗ್ರೆಸ್ಗೆ ಮತ್ತೊಂದು ಆಘಾತ!
ಮಾರ್ಚ್ ಮೊದಲ ವಾರ ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ನಿರೀಕ್ಷೆ ಇದೆ. ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ರಾಜ್ಯ ಘಟಕಗಳಿಂದ ಮಾಹಿತಿ ಕೇಳಿದೆ. ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಮೇ ಮೊದಲ ವಾರ ಅಥವಾ ಎರಡನೇ ವಾರ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ