ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್ಆರ್ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ
ಚಿಕ್ಕಮಗಳೂರಿನ ಕೈಮರ ಸಮೀಪ ಕೆಎಸ್ಆರ್ಟಿಸಿ ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದ್ದಾರೆ. 'ಶಕ್ತಿ ಯೋಜನೆ' ನಂತರ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ದೇವೀರಮ್ಮ ದೇವಾಲಯಕ್ಕೆ ಹೊರಟಿದ್ದ ಬಸ್ ಸ್ಟಾರ್ಟ್ ಆಗದೆ, ಪ್ರಯಾಣಿಕರು ತಳ್ಳುವ ಪರಿಸ್ಥಿತಿ ಬಂದಿದೆ. ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಲಾಗಿದೆ.
ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್ಆರ್ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ನ್ನು ಸ್ಟಾರ್ಟ್ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ. ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

