AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Aug 24, 2026 | 6:02 PM

Share

ಚಿಕ್ಕಮಗಳೂರಿನಲ್ಲಿ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ಒಟ್ಟು ಏಳು ಜನರನ್ನು ವಶಕ್ಕೆ ಪಡೆದಿದ್ದು, ಆರು ಜನರ ವಿಚಾರಣೆ ಮುಂದುವರಿದಿದೆ. ಈ ಘಟನೆಯು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮೊಟೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು, ಆಗಸ್ಟ್​ 24: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ರೋಷನ್ ಎಂಬಾತನನ್ನು ಬಂಧಿಸಿದ್ದಾರೆ. ರೋಷನ್, ವಾಟ್ಸಾಪ್, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಂಡಿದ್ದ. ಟಿಪ್ಪು ಕಟೌಟ್ ವಿಡಿಯೋಗೆ ದೇಶವಿರೋಧಿ ಹಾಡು ಬಳಸಿ ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಅಪ್ರಾಪ್ತರು ಸೇರಿದಂತೆ ಉಳಿದ ಆರು ಮಂದಿಯನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More