ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ: ಪ್ರಶ್ನೆ ಮಾಡಿದಕ್ಕೆ ಧಮ್ಕಿ
ಬೆಂಗಳೂರಿನಿಂದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಕೆಲವರು ಮದ್ಯಪಾನ ಮಾಡಿ ಹುಚ್ಚಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನು ಪ್ರಶ್ನೆ ಮಾಡಿದ ಪ್ರವಾಸಿ ಮಿತ್ರ ಪಡೆಯ ಸದಸ್ಯರಿಗೆ ಧಮ್ಕಿ ಹಾಕಿರುವ ಘಟನೆ ಕೂಡ ನಡೆದಿದೆ.
ಚಿಕ್ಕಮಗಳೂರು, ನವೆಂಬರ್ 13: ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ಸಾಕಷ್ಟು ಪ್ರವಾಸಿಗರ (Tourists) ಭೇಟಿ ನೀಡುತ್ತಾರೆ. ಹೀಗಿರುವಾಗ ಕೆಲ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಾರೆ. ಮುಳ್ಳಯ್ಯನಗಿರಿ ಭಾಗದಲ್ಲಿ ಮದ್ಯಪಾನ ನಿಷೇಧ ಮಾಡಿದ್ದರೂ ಬೆಂಗಳೂರು ಮೂಲದ ಪ್ರವಾಸಿಗರಿಂದ ಎಣ್ಣೆ ಪಾರ್ಟಿ ಮಾಡಲಾಗಿದೆ. ಇದನ್ನು ಪ್ರಶ್ನೆ ಮಾಡಿದ ಪ್ರವಾಸಿ ಮಿತ್ರ ಪಡೆಯ ಸದಸ್ಯರಿಗೆ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಕದ್ದು ಮುಚ್ಚಿ ಡ್ರಿಂಕ್ಸ್ ತಂದು ಪಾರ್ಟಿ ಮಾಡುತ್ತಿದ್ದರು. ಇವರಿಂದಾಗಿ ಇನ್ನುಳಿದ ಪ್ರವಾಸಿಗರಿಗೂ ಕಿರಿಕಿರಿ ಉಂಟಾಗಿದೆ. ಸದ್ಯ ಮದ್ಯವಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos