ಕಾಫಿನಾಡಿನಲ್ಲಿ ಮುಂಗಾರು ಮಳೆ ಆರ್ಭಟ: ಭೋರ್ಗರೆದು ಹರಿಯುತ್ತಿರುವ ಕಳಸದ ಪ್ರಸಿದ್ಧ ಸೂರುಮನೆ ಜಲಪಾತ

Edited By:

Updated on: Jul 08, 2026 | 9:26 AM

Surumane Falls: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಮೂಡಿಗೆರೆ, ಶೃಂಗೇರಿ, ಕಳಸ ಸೇರಿದಂತೆ ವಿವಿಧ ತಾಲೂಕುಗಳು ಜಲಾವೃತಗೊಂಡಿವೆ. ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರಸಿದ್ಧ ಸೂರುಮನೆ ಜಲಪಾತ ಭೋರ್ಗರೆದು ಹರಿಯುತ್ತಿದೆ. ಸೂರುಮನೆ ಜಲಪಾತದಲ್ಲಿ ಜಲರಾಶಿ ಧುಮ್ಮಿಕ್ಕುತ್ತಿರುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಪ್ರಮುಖ ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್. ಪುರ ಹಾಗೂ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡುವಿಲ್ಲದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಈ ಭಾರಿ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ವರುಣಾರ್ಭಟಕ್ಕೆ ಕಳಸ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ‘ಸೂರುಮನೆ ಜಲಪಾತ (Soorumane Falls)’ ಸಂಪೂರ್ಣವಾಗಿ ಮೈದುಂಬಿಕೊಂಡಿದೆ. ಘಟ್ಟ ಪ್ರದೇಶದ ನೀರೆಲ್ಲವೂ ಜಲಪಾತಕ್ಕೆ ಹರಿದು ಬರುತ್ತಿರುವುದರಿಂದ ಸೂರುಮನೆ ಫಾಲ್ಸ್ ಭೋರ್ಗರೆದು ಹರಿಯುತ್ತಿದ್ದು, ರುದ್ರರಮಣೀಯವಾಗಿ ಕಂಗೊಳಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More