ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು!
ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮೂಡಿಗೆರೆ, ಕಳಸದಲ್ಲಿ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಕೊಟ್ಟಿಗೆಹಾರ, ಬಣಕಲ್‌ನಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಮಳೆಯಿಂದ ಕಾಫಿ-ಅಡಿಕೆ ಬೆಳೆಗಾರರಿಗೆ ಸಂತಸವಾಗಿದ್ದು, ಘಾಟ್ ಪ್ರದೇಶಗಳಲ್ಲಿ ಸಂಚರಿಸುವವರು ಜಾಗರೂಕತೆ ವಹಿಸಲು ಸೂಚಿಸಲಾಗಿದೆ.
ಚಿಕ್ಕಮಗಳೂರು, ಮೇ.12: ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಮೂಡಿಗೆರೆ ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ. ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸವಾರರು ದೀಪಗಳನ್ನು ಉರಿಸಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ಕೊಟ್ಟಿಗೆಹಾರ ಮತ್ತು ಬಣಕಲ್ ಭಾಗದಲ್ಲಿಯೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಲೆನಾಡಿನ ಭಾಗದಲ್ಲಿ ಸುರಿಯುತ್ತಿರುವ ಈ ಮಳೆಯು ಕಾಫಿ ಮತ್ತು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ. ವಾಹನ ಸವಾರರು ಮತ್ತು ಪ್ರವಾಸಿಗರು ಘಾಟ್ ಪ್ರದೇಶಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ

