ಶಿಕ್ಷಕಿಯನ್ನು ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ
ಶಿಕ್ಷಕಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಭವಿತ್, ಪ್ರೀತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ಕೃತ್ಯ ಎಸಗಿದ್ದಾನೆ. ಸದ್ಯ ಬಾಳೂರು ಸಮೀಪದ ಚಂದುವಳ್ಳಿ ಗ್ರಾಮದಲ್ಲಿ ಭವಿತ್ನನ್ನು ಜಯಪುರ ಪೋಲೀಸರು ಬಂಧಿಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.
ಚಿಕ್ಕಮಗಳೂರು, (ಅಕ್ಟೋಬರ್ 29): ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಪ್ರಕರಣ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಶಿಕ್ಷಕಿಯ ಹತ್ತಿರದ ಸಂಬಂಧಿ ಭವಿತ್ ಎನ್ನುವ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.