ಶಿಕ್ಷಕಿಯನ್ನು ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

Updated on: Oct 29, 2025 | 7:34 PM

ಶಿಕ್ಷಕಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಭವಿತ್, ಪ್ರೀತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ಕೃತ್ಯ ಎಸಗಿದ್ದಾನೆ. ಸದ್ಯ ಬಾಳೂರು ಸಮೀಪದ ಚಂದುವಳ್ಳಿ ಗ್ರಾಮದಲ್ಲಿ ಭವಿತ್​​ನನ್ನು ಜಯಪುರ ಪೋಲೀಸರು ಬಂಧಿಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಚಿಕ್ಕಮಗಳೂರು, (ಅಕ್ಟೋಬರ್ 29): ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಈ ಪ್ರಕರಣ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಶಿಕ್ಷಕಿಯ ಹತ್ತಿರದ ಸಂಬಂಧಿ ಭವಿತ್ ಎನ್ನುವ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಭವಿತ್, ಪ್ರೀತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡು ಕೃತ್ಯ ಎಸಗಿದ್ದಾನೆ. ಸದ್ಯ ಬಾಳೂರು ಸಮೀಪದ ಚಂದುವಳ್ಳಿ ಗ್ರಾಮದಲ್ಲಿ ಭವಿತ್​​ನನ್ನು ಜಯಪುರ ಪೋಲೀಸರು ಬಂಧಿಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಕೊಪ್ಪದಲ್ಲಿ ಹೇಯ ಕೃತ್ಯ: ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿಯ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More