ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಕೇರಳದ ಪ್ರವಾಸಿ ಬಸ್ ಸೀಜ್

Edited By:

Updated on: Nov 06, 2026 | 6:43 PM

ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಿಸುವ ಬರಹಗಳನ್ನು ಹೊಂದಿದ್ದ ಕೇರಳ ಮೂಲದ ಖಾಸಗಿ‌ ಬಸ್​ನ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸೀಜ್​​ ಮಾಡಿದ್ದಾರೆ. ಬರಹ ನೋಡಿ‌ ಬಸ್ ತಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು, ಚಾಲಕ ಸೇರಿ ಮಾಲೀಕರ ವಿರುದ್ಧ FIR ದಾಖಲು ‌ಮಾಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಚಿಕ್ಕಮಗಳೂರು, ನವೆಂಬರ್​​ 06: ಉಗ್ರ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಬರಹಗಳನ್ನು ಹೊಂದಿದ್ದ ಕೇರಳ ಮೂಲದ ಖಾಸಗಿ ಪ್ರವಾಸಿ ಬಸ್ಸೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದಿಂದ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಈ ಬಸ್ಸಿನ ಮೇಲೆ ರೈಸ್ ಆಫ್ ಅ ಡಾನ್ ಸೇರಿದಂತೆ ದಾವೂದ್ ಇಬ್ರಾಹಿಂನನ್ನು ಹೊಗಳುವ ಹಲವಾರು ಬರಹಗಳನ್ನು ಬರೆಯಲಾಗಿತ್ತು. ಈ ಬರಹಗಳನ್ನು ಗಮನಿಸಿದ ಹಿಂದೂಪರ ಸಂಘಟನೆಗಳು ಬಸ್ಸನ್ನು ತಡೆದು ಚಾಲಕ ಸೇರಿ ಮಾಲೀಕರ ವಿರುದ್ಧ FIR ದಾಖಲು ‌ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಸ್ಸನ್ನು ಸೀಜ್ ಮಾಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More