ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ

Edited By:

Updated on: Feb 11, 2026 | 4:39 PM

ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದ ಮದುವೆ ರಿಸೆಪ್ಷನ್‌ನಲ್ಲಿ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ಮಾಡಿದ್ದಾರೆ. ವಧು-ವರರ ಮುಂದೆ ಅಸಭ್ಯವಾಗಿ ವರ್ತಿಸಿ, ಸಂಬಂಧಿಕರಿಗೆ ಬೆದರಿಕೆ ಹಾಕಿದ್ದಾರೆ. ಕೇಳಿದಷ್ಟು ಹಣ ನೀಡದಿದ್ದರೆ ಕಿರಿಕ್ ಮಾಡುವುದಾಗಿ ಗಲಾಟೆ ಮಾಡಿದ್ದಾರೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಿಕರು ಮಧ್ಯಪ್ರವೇಶಿಸಿ ಮಂಗಳಮುಖಿಯರಿಗೆ ಬುದ್ಧಿವಾದ ಹೇಳಿದ್ದಾರೆ.

ಚಿಕ್ಕಮಗಳೂರು, ಫೆಬ್ರವರಿ 11: ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವಂತಹ ಘಟನೆ ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್​​ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಸಂಬಂಧಿಕರು ಮಂಗಳಮುಖಿಯರಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More