ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದಲ್ಲಿ, 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕ ವಿಶ್ವನಾಥ್ ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಕೊಳವೆ ಬಾವಿಯ ಮೇಲ್ಭಾಗ ಸ್ವಚ್ಛಗೊಳಿಸುವಾಗ ವಿಶ್ವನಾಥ್ ಆಳಕ್ಕೆ ಬಿದ್ದಿದ್ದು, ಗಂಭೀರ ಗಾಯಗಳಾಗಿವೆ. ಕೂಡಲೇ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮಗಳೂರು, ಜುಲೈ 15: ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಒಂದು ದುರಂತ ಸಂಭವಿಸಿದೆ. ಶಾಲೆಯ ಆವರಣದ ಕೊಳವೆ ಬಾವಿಯ ಮೇಲ್ಭಾಗವನ್ನು ಸ್ವಚ್ಛಗೊಳಿಸುವ ವೇಳೆ ವಿಶ್ವನಾಥ್ ಎಂಬ ಕಾರ್ಮಿಕ ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ವಿಶ್ವನಾಥ್ರನ್ನ ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಬಾವಿಗೆ ಬಿದ್ದ ರಭಸಕ್ಕೆ ವಿಶ್ವನಾಥ್ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಚಿಕಿತ್ಸೆಗಾಗಿ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 15, 2026 06:18 PM
Follow Us