Chikkamagaluru Honnamma Falls: ಚಿಕ್ಕಮಗಳೂರಿನ ಹೊನ್ನಮ್ಮ ಜಲಪಾತಕ್ಕೆ ಜೀವಕಳೆ; ಇಲ್ಲಿದೆ ಅದರ ಝಲಕ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 25, 2023 | 10:33 AM

ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಆಯ್ದ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಹೊನ್ನಮ್ಮ ಜಲಪಾತಕ್ಕೆ ಜೀವಕಳೆ ಬಂದಿದ್ದು, ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಚಿಕ್ಕಮಗಳೂರು, ಜು.25: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಉತ್ತರ ಕರ್ನಾಟಕದ ಆಯ್ದ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಹೇಮಾವತಿ, ತುಂಗಾ ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭದ್ರಾ ನದಿ ಅಬ್ಬರಕ್ಕೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಕೊಪ್ಪ, ಕಳಸ‌, ಮೂಡಿಗೆರೆ, N.R ಪುರ, ಚಿಕ್ಕಮಗಳೂರು ತಾಲೂಕಿನಾದ್ಯಂತ ಮಳೆ ಮುಂದುವರಿದಿದೆ. ಈ ಹಿನ್ನಲೆ ಚಿಕ್ಕಮಗಳೂರು(Chikkamagaluru)ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮಧ್ಯೆ ಜಿಲ್ಲೆಯ ಹೊನ್ನಮ್ಮ ಜಲಪಾತಕ್ಕೆ ಜೀವಕಳೆ ಬಂದಿದ್ದು, ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಅದರ ಝಲಕ್​ ಇಲ್ಲಿದೆ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ