Chikkamagaluru: ಭಾರಿ ಮಳೆ ಹಿನ್ನೆಲೆ ಭೋರ್ಗರೆಯುತ್ತಿದೆ ಕಾಮೇನಹಳ್ಳಿ ಜಲಪಾತ; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 9:54 AM

ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಅದರಂತೆ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಕಾಮೇನಹಳ್ಳಿ ಜಲಪಾತಕ್ಕೆ ಜೀವಕಳೆ ಬಂದಿದ್ದು, ಇಲ್ಲಿದೆ ನೋಡಿ ವಿಡಿಯೋ.

ಚಿಕ್ಕಮಗಳೂರು,ಜು.29: ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಅದರಂತೆ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಕಾಮೇನಹಳ್ಳಿ ಜಲಪಾತಕ್ಕೆ ಜೀವಕಳೆ ಬಂದಿದೆ. ಹೌದು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಇರುವ ಕಾಮೇನಹಳ್ಳಿ ಫಾಲ್ಸ್ ಭೋರ್ಗರೆಯುತ್ತಿದೆ. ಈ ಮೂಲಕ ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿರುವ ಕಾಮೇನಹಳ್ಳಿ ಫಾಲ್ಸ್​ಗೆ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮಲ್ಲೇನಹಳ್ಳಿ ಗ್ರಾಮ ಪಂಚಾಯತಿಯಿಂದ ನಿರ್ಬಂಧ ಹೇರಲಾಗಿದೆ. ಇದರಿಂದ ಪ್ರವಾಸಿಗರ ಹುಚ್ಚಾಟಕ್ಕೆ ಬ್ರೇಕ್ ಹಾಕಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More