ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ, 10 ಜನರ ರಕ್ಷಣೆ
ಚಿಕ್ಕಮಗಳೂರು ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ.
ಚಿಕ್ಕಮಗಳೂರು, ಅಕ್ಟೋಬರ್ 31: ಚಿಕ್ಕಮಗಳೂರು (Chikkamagaluru) ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ (Deviramma) ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಮೂಲದ ಜಯಮ್ಮ (55) ಅಸ್ವಸ್ಥಗೊಂಡ ಮಹಿಳೆ. ಪೊಲೀಸರು ಹಗ್ಗದ ಮೂಲಕ ಮಹಿಳೆಯನ್ನು ರಕ್ಷಣೆ ಮಾಡಿದರು. ಈವರೆಗೆ ಅಸ್ವಸ್ಥಗೊಂಡಿದ್ದ 10ಕ್ಕೂ ಅಧಿಕ ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಭಕ್ತರು ಸಿಕ್ಕ ಸಿಕ್ಕ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಆ್ಯಂಬುಲೆನ್ಸ್ ಹೋಗಲು ದಾರಿ ಇಲ್ಲದಂತಾಯಿತು. ಕೊನೆಗೆ ಪೊಲೀಸರು ಪಾರ್ಕಿಂಗ್ ಮಾಡಿದ್ದ ಕಾರು, ಬೈಕ್ಗಳನ್ನು ತೆರವು ಗೊಳಿಸಿ, ಆಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:28 pm, Thu, 31 October 24