ಚಲಿಸುತ್ತಿದ್ದ ಐರಾವತ ಸೆಮಿ ಸ್ಲೀಪರ್​ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಪ್ರಯಾಣಿಕರು ಪಾರು

| Updated By: ವಿವೇಕ ಬಿರಾದಾರ

Updated on: May 14, 2024 | 3:06 PM

KA01 F9077 ಐರಾವತ ಸೆಮಿ ಸ್ಲೀಪರ್ ಬಸ್ 40 ಪ್ರಯಾಣಿಕರನ್ನು ಹೊತ್ತು ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿತ್ತು. ಬಸ್​​ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಬಸ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಬಸ್​ ಸುಟ್ಟು ಕರಕಲಾಗಿದೆ.

ಚಿಕ್ಕಮಗಳೂರು, ಮೇ 10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್​ಗಳು ದೇಶದಲ್ಲಿ ಪ್ರಖ್ಯಾತಿ ಪಡೆದಿರುವ ಸಂಪರ್ಕ ಸಾರಿಗೆಗಳು. ಕೆಎಸ್​ಆರ್​ಟಿಸಿ ವೇಗ ಮತ್ತು ಆರಾಮದಾಯಕ ಪ್ರಯಾಣಕ್ಕೆ ಹಾಗೂ ನೋಡಲು ಕೂಡ ಬಹಳ ಅಂದವಾದ ಬಸ್​ಗಳು. ಕೆಎಸ್​ಆರ್​ಟಿಸಿಯ ನಾಲ್ಕು ವಿಭಾಗದ ಬಸ್​ಗಳಲ್ಲಿ ಪ್ರತಿದಿನ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಸೋಮವಾರ (ಮೇ 13)ರ ಮಧ್ಯರಾತ್ರಿ ಚಲಿಸುತ್ತಿದ್ದ ಐರಾವತ ಸೆಮಿ ಸ್ಲೀಪರ್ (Airavata Semi Sleeper) ಬಸ್​ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ​

KA01 F9077 ಐರಾವತ ಸೆಮಿ ಸ್ಲೀಪರ್ ಬಸ್ 40 ಪ್ರಯಾಣಿಕರನ್ನು ಹೊತ್ತು ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿತ್ತು. ಬಸ್​​ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಬಸ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಕೂಡಲೆ ಬಸ್ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಮತ್ತು ಕಂಡಕ್ಟರ್ ಮಲಗಿದ್ದ ಪ್ರಯಾಣಿಕರನ್ನು ಬಸ್​ನಿಂದ ಕೆಳಗೆ ಇಳಿಸಿದ್ದಾರೆ.

ಇದನ್ನೂ ಓದಿ: ಬಾಂಬ್ ಬೆದರಿಕೆ ಬೆನ್ನಲ್ಲೇ ಕೆಎಸ್​ಆರ್​ಟಿಸಿ ಅಧಿಕಾರಿಗಳು ಅಲರ್ಟ್: ಅಂಬಾರಿ ಉತ್ಸವ ಬಸ್​ನಲ್ಲಿ ಹೇಗಿದೆ ಸುರಕ್ಷತಾ ಕ್ರಮ?

ಬಳಿಕ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ವಾಹನ ಬರುವಷ್ಟರಲ್ಲಿ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಬಂದ ಕೂಡಲೆ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೂ ಬಸ್ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬಸ್​ಗೆ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ. ತರೀಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಎಸ್​ಆರ್​ಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on