AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

ಮದನ್​ ಕುಮಾರ್​
|

Updated on: Aug 31, 2026 | 9:16 PM

Share

ನಟ ಚಿಕ್ಕಣ್ಣ ಆಗಸ್ಟ್ 30ರಂದು ಮೈಸೂರಿನಲ್ಲಿ ಪಾವನಾ ಜೊತೆ ವಿವಾಹವಾದರು. ಮರುದಿನವೇ (ಆ.31) ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೆಳೆಯರ ಜೊತೆ ಬಂದು ದೇವರ ದರ್ಶನ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಚಿಕ್ಕಣ್ಣ, ಪಾವನಾ ಭೇಟಿ ನೀಡಿರುವ ವಿಡಿಯೋ ಇಲ್ಲಿದೆ.

ಚಾಮರಾಜನಗರ: ಖ್ಯಾತ ಹಾಸ್ಯ ನಟ ಚಿಕ್ಕಣ್ಣ (Chikkanna) ಅವರು ಆಗಸ್ಟ್ 30ರಂದು ಮೈಸೂರಿನಲ್ಲಿ ಪಾವನಾ ಜೊತೆ ವಿವಾಹವಾದರು. ಮರುದಿನವೇ (ಆ.31) ಅವರು ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಗೆಳೆಯರ ಜೊತೆ ಬಂದು ಅವರು ದೇವರ ದರ್ಶನ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಚಿಕ್ಕಣ್ಣ ಮತ್ತು ಪತ್ನಿ ಪಾವನಾ ಅವರು ಭೇಟಿ ನೀಡಿರುವ ವಿಡಿಯೋ ಲಭ್ಯವಾಗಿದೆ. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ದೇವರ ಆಶೀರ್ವಾದ ಪಡೆದರು. ದೇವಸ್ಥಾನದ ಪ್ರದಕ್ಷಿಣೆ ಹಾಕಿದರು. ಹಿಮ ಮತ್ತು ಹಸಿರಿನಿಂದ ಕಂಗೊಳಿಸುವ ಪ್ರಕೃತಿಯನ್ನು ಕಣ್ತುಂಬಿಕೊಂಡರು. ಕನ್ನಡ ಚಿತ್ರರಂಗದಲ್ಲಿ ಚಿಕ್ಕಣ್ಣ ಅವರಿಗೆ ಸಖತ್ ಬೇಡಿಕೆ ಇದೆ. ಸದ್ಯಕ್ಕೆ ಮದುವೆ ಸಲುವಾಗಿ ಅವರು ಸಿನಿಮಾದ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More