Chikkodi Hospital Leaking: ಬೆಳಗ್ಗೆಯಿಂದ ಭಾರೀ ಮಳೆ, ಸೋರುತ್ತಿದೆ ನೋಡಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ!

ಸಾಧು ಶ್ರೀನಾಥ್​

Updated on: Jul 27, 2023 | 4:53 PM

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಇಂದು ಗುರುವಾರ ಬೆಳಗ್ಗೆಯಿಂದ ನಿರಂತರವಾಗಿ ಮಳೆಯ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಕಟ್ಟಡ ಒಂದೇ ದಿನದ ಭಾರೀ ಮಳೆಗೆ ಸೋರುತ್ತಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬೆಳಗ್ಗೆಯಿಂದ ನಿರಂತರವಾಗಿ ಮಳೆಯ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ (Chikkodi Government Hospital) ಕಟ್ಟಡ ಒಂದೇ ದಿನದ ಭಾರೀ ಮಳೆಗೆ (Heavy Rains) ಸೋರುತ್ತಿದೆ. ಚಿಕ್ಕೋಡಿ ಆಸ್ಪತ್ರೆ 2ನೇ ಮಹಡಿಯಲ್ಲಿ ಮೇಲ್ಛಾವಣಿಯಿಂದ ನೀರು ಸೋರುತ್ತಿದೆ. ಆಸ್ಪತ್ರೆ ಕಟ್ಟಡ ಸೋರುತ್ತಿರುವ (Leaking) ಹಿನ್ನೆಲೆಯಲ್ಲಿ ಸಿಬ್ಬಂದಿ ಬಕೆಟ್ ಇಟ್ಟಿದ್ದಾರೆ. ಹೆರಿಗೆ, ಶಸ್ತ್ರಚಿಕಿತ್ಸೆ ವಿಭಾಗದ ಮಹಡಿಯಲ್ಲಿ ಮೇಲ್ಚಾವಣಿ ಸೋರಿಕೆಯಾಗುತ್ತಿದೆ. ಗರ್ಭಿಣಿ, ಬಾಣಂತಿಯರು ಬೆಚ್ಚಗಿನ ವಾತಾವರಣದಲ್ಲಿ ಇರಬೇಕು. ಆದರೆ ಈ ರೀತಿಯ ತಂಪಾದ ವಾತಾವರಣದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಸನ್ನಿಯಾಗಿ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಕೂಡಲೇ ಆಸ್ಪತ್ರೆ ಕಟ್ಟಡ ದುರಸ್ತಿಗೆ ರೋಗಿಗಳ ಸಂಬಂಧಿಕರು ಆಗ್ರಹಿಸಿದ್ದಾರೆ. (ವರದಿ: ಆರ್. ರಾಜು, ಟಿವಿ9, ಚಿಕ್ಕೋಡಿ)

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು