ಚಿಕ್ಕೋಡಿಯ ಶೇಲ್ಲೆವ್ವಾ ದೇವಿ ಜಾತ್ರೆ: ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಚಿಕ್ಕೋಡಿಯ ಶೇಲ್ಲೆವ್ವಾ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ ನೂರಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ವಾಂತಿ-ಭೇದಿಯಿಂದ ಬಳಲಿದವರನ್ನು ಕಬ್ಬೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 71 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 30 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಆರೋಗ್ಯ ಇಲಾಖೆ ಹಾಗೂ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ, ಅಕ್ಟೋಬರ್ 21: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದಲ್ಲಿ ನಡೆದಿದೆ. ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರಿಗೆ ವಾಂತಿ-ಭೇದಿ ಶುರುವಾಗಿದ್ದು, ಅಸ್ವಸ್ಥರನ್ನು ಕಬ್ಬೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ 71 ಜನ ಡಿಸ್ಚಾರ್ಜ್ ಆಗಿದ್ದರೆ, ಉಳಿದ ಸುಮಾರು 30 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

