ಚಿಕ್ಕಮಗಳೂರು: ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು; ನಗರಕ್ಕೆ ಬರದಂತೆ ಓಡಿಸಲು ಹರಸಾಹಸ

Edited By:

Updated on: Nov 16, 2023 | 7:45 PM

ನಲ್ಲೂರಿನಲ್ಲಿ 6 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರೆದಿದೆ. ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಭುವನೇಶ್ವರಿ ಗ್ಯಾಂಗ್‌ನ ಆರು ಕಾಡಾನೆ(Elephant)ಗಳನ್ನು ಮತ್ತೆ ಅರಣ್ಯಕ್ಕೆ ಓಡಿಸಲು 3 ಸಾಕಾನೆಗಳನ್ನು ಬಳಸಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಯಿಂದ ಕಾರ್ಯಾಚರಣೆ ಶುರುವಾಗಿದೆ.

ಚಿಕ್ಕಮಗಳೂರು, ನ.16: ನಲ್ಲೂರಿನಲ್ಲಿ 6 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರೆದಿದೆ. ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಭುವನೇಶ್ವರಿ ಗ್ಯಾಂಗ್‌ನ ಆರು ಕಾಡಾನೆ(Elephant)ಗಳನ್ನು ಮತ್ತೆ ಅರಣ್ಯಕ್ಕೆ ಓಡಿಸಲು 3 ಸಾಕಾನೆಗಳನ್ನು ಬಳಸಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಯಿಂದ ಕಾರ್ಯಾಚರಣೆ ಶುರುವಾಗಿದೆ. ಚಿಕ್ಕಮಗಳೂರು(Chikkamagaluru) ನಗರದಿಂದ ಕೇವಲ ಒಂದು ಕಿ.ಮೀ ದೂರದಲ್ಲಿ ಕಾಡಾನೆಗಳ ಹಿಂಡಿದೆ. ಅವು ನಗರ ಪ್ರವೇಶಿಸದಂತೆ ಓಡಿಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಕಾರ್ಯಾಚರಣೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್‌ ಕೂಡ ಅಳವಡಿಸಲಾಗಿದೆ. ಭುವನೇಶ್ವರಿ ಗ್ಯಾಂಗ್‌ನ ಕಾಡಾನೆಗಳ ಉಪಟಳಕ್ಕೆ ಬೇಸತ್ತಿದ್ದ ಗ್ರಾಮಸ್ಥರ ಆಕ್ರೋಶ ಹಿನ್ನೆಲೆ ಅರಣ್ಯ ಸಿಬ್ಬಂದಿಯಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More