ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್ ಗುಂಡೂರಾವ್

ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್ ಗುಂಡೂರಾವ್

ಗಂಗಾಧರ​ ಬ. ಸಾಬೋಜಿ
|

Updated on: Sep 22, 2024 | 8:47 PM

ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಮಗು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್​ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 22: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು ಮಗು ಸಾವು ಕೇಸ್​ಗೆ ಸಂಬಂಧಿಸಿದಂತೆ​ ಕೆ.ಸಿ.ಜನರಲ್​ ಆಸ್ಪತ್ರೆಗೆ ಸಚಿವ ದಿನೇಶ್​ ಗುಂಡೂರಾವ್ (Dinesh Gundu Rao)​ ಭೇಟಿ ನೀಡಿ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ. ಗೇಟ್​ ಹಾಳಾದ ಬಗ್ಗೆ ಯಾರೂ ಕಂಪ್ಲೇಂಟ್​ ಕೊಟ್ಟಿಲ್ಲ. ಇದುವರೆಗೂ ಈ ಬಗ್ಗೆ ನಮ್ಮ ಗಮನಕ್ಕಂತೂ ಬಂದಿಲ್ಲ. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್​ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ನಮ್ಮ ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.