ಹೆಚ್ಎಂಪಿವಿ ಸೋಂಕಿತ ಮಗುವಿನ ಅರೋಗ್ಯ ಸ್ಥಿರವಾಗಿದೆ, ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 06, 2025 | 2:00 PM

ಹೆಚ್​ಎಂಪಿ ವೈರಸ್ 2001ರಿಂದ ಭಾರತದಲ್ಲಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ ಹಾಗಾಗಿ ಜನ ಆತಂಕಪಡುವ ಅವಶ್ಯಕತೆಯಿಲ್ಲ, ರೋಗ ನಿರೋಧಕ ಶಕ್ತಿ ಕಮ್ಮಿ ಇರುವವರ ಮೇಲೆ ಅಂದರೆ ಮಕ್ಕಳು ಮತ್ತು ವಯಸ್ಸಾದವರ ಮೇಲೆ ಇದು ದಾಳಿ ಮಾಡುತ್ತದೆ, ಸೋಂಕುನಿಂದ ಹರಡುವ ಎಲ್ಲ ರೋಗಗಳ ವಿಷಯದಲ್ಲಿ ತಳೆಯುವ ಎಚ್ಚರವನ್ನು ಹೆಚ್ಎಂಪಿ ವೈರಸ್ ವಿಷಯದಲ್ಲೂ ಅನುಸರಿಸಬೇಕು ಎಂದು ಸಚಿವ ಹೇಳುತ್ತಾರೆ.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಹೆಚ್ಎಂಪಿವಿಯಿಂದ ಸೋಂಕಿತವಾಗಿರುವ ಮಗುವಿನ ಅರೋಗ್ಯ ಸ್ಟೇಬಲ್ ಆಗಿದೆ, ಭೀತಿಗೊಳಗಾಗುವ ಸನ್ನಿವೇಶವೇನೂ ಇಲ್ಲ ಎಂದರು. ವೈರಸ್ ಚೀನಾದಲ್ಲಿ ಪತ್ತೆಯಾಗಿರುವ ಕಾರಣ ಜನರಲ್ಲಿ ಭಯ ಮನೆಮಾಡಿದೆ, ಆದರೆ ಯಾರೂ ಹೆದರುವ ಅಗತ್ಯವಿಲ್ಲ ಮತ್ತು ಧಾವಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರೋದು ಬೇಡ, ಕೇಂದ್ರ ಸರ್ಕಾರ ಮತ್ತು ಐಸಿಎಂಆರ್ ಇದುವರಗೆ ಮಾರ್ಗಸೂಚಿಗಳನ್ನು ಜಾರಿಮಾಡಿಲ್ಲ, ಅಧಿಕಾರಿಗಳೊಂದಿಗೆ ಮಾತಾಡಿ ನಿರಂತರವಾಗಿ ಐಸಿಎಂಆರ್ ಜೊತೆ ಸಂಪರ್ಕದಲ್ಲಿರುವಂತೆ ತಿಳಿಸುವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಈ ಸರ್ಕಾರ ಅಧಿಕಾರದಲ್ಲಿದ್ದರೆ ಹೆಚ್ಎಂಪಿವಿಯಿಂದ ಭಗವಂತನೇ ಜನರನ್ನು ಕಾಪಾಡಬೇಕು: ಡಾ ಸಿಎನ್ ಅಶ್ವಥ್ ನಾರಾಯಣ  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.