ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಗ್ರ್ಯಾಂಡ್ ಆಗಿ ಬಿಡುಗಡೆ ಆಗಿದೆ. ಎ.ಪಿ. ಅರ್ಜುನ್ ನಿರ್ದೇಶನ ಮಾಡಿದ ಈ ಸಿನಿಮಾಗೆ ಸಿನಿಪ್ರಿಯರು ಭರ್ಜರಿ ಸ್ವಾಗತ ಕೋರಿದ್ದಾರೆ. ಹಲವು ಚಿತ್ರಮಂದಿರಗಳು ಹೌಸ್ಫುಲ್ ಆಗಿವೆ. ಬೆಂಗಳೂರಿನಲ್ಲಿ ಥಿಯೇಟರ್ ಎದುರು ಮಕ್ಕಳು ಡ್ಯಾನ್ಸ್ ಮಾಡುವ ಮೂಲಕ ಸೆಲೆಬ್ರೇಷನ್ನಲ್ಲಿ ಭಾಗಿಯಾಗಿದ್ದಾರೆ.
ಎಲ್ಲ ವರ್ಗದ ಪ್ರೇಕ್ಷಕರು ‘ಮಾರ್ಟಿನ್’ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ ಎಂಬುದು ಧ್ರುವ ಸರ್ಜಾ ಅವರಿಗೆ ಸಂತಸ ತಂದಿದೆ. ಆ್ಯಕ್ಷನ್ ಇಷ್ಟಪಡುವ ಪ್ರೇಕ್ಷಕರು ಈ ಚಿತ್ರವನ್ನು ಹೆಚ್ಚು ಹೊಗಳುತ್ತಿದ್ದಾರೆ. ರಾಜ್ಯಾದ್ಯಂತ ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದೆ. ದಸರಾ ಪ್ರಯುಕ್ತ ತೆರೆಕಂಡ ‘ಮಾರ್ಟಿನ್’ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್ಫುಲ್ ಆಗಿದೆ. ಉದಯ್ ಮೆಹ್ತಾ ನಿರ್ಮಾಣದ ಈ ಚಿತ್ರಕ್ಕೆ ಎ.ಪಿ. ಅರ್ಜುನ್ ಅವರು ನಿರ್ದೇಶನ ಮಾಡಿದ್ದಾರೆ. ವೈಭವಿ ಶಾಂಡಿಲ್ಯ, ಅನ್ವೇಷಿ ಜೈನ್, ಚಿಕ್ಕಣ್ಣ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
