AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪ್ರದಾಯ ಮುರಿದು ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಸಂಪ್ರದಾಯ ಮುರಿದು ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ಸುಷ್ಮಾ ಚಕ್ರೆ
|

Updated on: Nov 18, 2026 | 5:11 PM

Share

ಚೀನಾದ ವಿಮಾನ ನಿಲ್ದಾಣದಲ್ಲಿ ಅಮೆರಿಕ ಅಧ್ಯಕ್ಷರಿಗಾಗಿ ರೆಡ್ ಕಾರ್ಪೆಟ್ ಸ್ವಾಗತ, ಸೇನಾ ಗೌರವ ವಂದನೆ ಹಾಗೂ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಸ್ವಾಗತವನ್ನು ಆಯೋಜಿಸಲಾಗಿತ್ತು. ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಉಭಯಕುಶಲೋಪರಿ ವಿಚಾರಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ, ಸುಂಕ ನೀತಿಗಳು ಮತ್ತು ಜಾಗತಿಕ ರಾಜತಾಂತ್ರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಟ್ರಂಪ್ ಅವರ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಶೆನ್‌ಝೆನ್, ನವೆಂಬರ್ 18: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ತಮ್ಮ ದೀರ್ಘಕಾಲದ ರಾಜತಾಂತ್ರಿಕ ಸಂಪ್ರದಾಯವನ್ನು ಮುರಿದು, ಚೀನಾ ಪ್ರವಾಸಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶೆನ್‌ಝೆನ್ ವಿಮಾನ ನಿಲ್ದಾಣದಲ್ಲಿ ತಾವೇ ಖುದ್ದಾಗಿ ಬರಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ವಿದೇಶಿ ನಾಯಕರು ಚೀನಾಕ್ಕೆ ಭೇಟಿ ನೀಡಿದಾಗ ಚೀನಾದ ಅಧ್ಯಕ್ಷರು ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸುವ ಪದ್ಧತಿ ಇರುವುದಿಲ್ಲ. ಅದರ ಬದಲಿಗೆ, ಗ್ರೇಟ್ ಹಾಲ್ ಆಫ್ ದಿ ಪೀಪಲ್‌ನಲ್ಲಿ (Great Hall of the People) ಅಧಿಕೃತ ಸ್ವಾಗತ ನೀಡಲಾಗುತ್ತದೆ. ಆದರೆ, ಈ ಸಂಪ್ರದಾಯವನ್ನು ಬದಿಗಿಟ್ಟ ಕ್ಸಿ ಜಿನ್‌ಪಿಂಗ್ ತಾವೇ ಸ್ವತಃ ಶೆನ್‌ಝೆನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ‘ಏರ್ ಫೋರ್ಸ್ ಒನ್’ ವಿಮಾನದ ಬಳಿಯೇ ಟ್ರಂಪ್ ಅವರನ್ನು ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಚೀನಾದ ವಿಮಾನ ನಿಲ್ದಾಣದಲ್ಲಿ ಅಮೆರಿಕ ಅಧ್ಯಕ್ಷರಿಗಾಗಿ ರೆಡ್ ಕಾರ್ಪೆಟ್ ಸ್ವಾಗತ, ಸೇನಾ ಗೌರವ ವಂದನೆ ಹಾಗೂ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಸ್ವಾಗತವನ್ನು ಆಯೋಜಿಸಲಾಗಿತ್ತು. ಉಭಯ ನಾಯಕರು ಪರಸ್ಪರ ಹಸ್ತಲಾಘವ ಮಾಡಿ ಉಭಯಕುಶಲೋಪರಿ ವಿಚಾರಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ, ಸುಂಕ ನೀತಿಗಳು ಮತ್ತು ಜಾಗತಿಕ ರಾಜತಾಂತ್ರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಟ್ರಂಪ್ ಅವರ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

 

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More