ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು

Updated on: Apr 29, 2025 | 4:33 PM

ಚೀನಾದ ಲಿಯಾಯಾಂಗ್ ನಗರದಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ 22 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯ ಕಾರಣವನ್ನು ಇನ್ನೂ ಖಚಿತಪಡಿಸಿಕೊಂಡಿಲ್ಲ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎಲ್ಲಾ ಪ್ರಯತ್ನಗಳನ್ನು ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬೀಜಿಂಗ್, ಏಪ್ರಿಲ್ 29: ಚೀನಾದ (China) ಲಿಯಾನಿಂಗ್ ಪ್ರಾಂತ್ಯದ ಸಿಯಾಯಾಂಗ್ ನಗರದಲ್ಲಿ ಇಂದು (ಮಂಗಳವಾರ) ಸಂಭವಿಸಿದ ಬೆಂಕಿ ಅವಘಡದಲ್ಲಿ (Fire Accident) 22 ಜನರು ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12.25ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 22 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಬೆಂಕಿ ಅವಘಡಕ್ಕೆ ಕಾರಣವಿನ್ನೂ ಗೊತ್ತಾಗಿಲ್ಲ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆದೇಶಿಸಿದ್ದಾರೆ. ಈ ರೆಸ್ಟೋರೆಂಟ್ ಬೆಂಕಿ ದುರಂತ ಈ ತಿಂಗಳು ಚೀನಾದಲ್ಲಿ ನಡೆದ ಎರಡನೇ ಪ್ರಮುಖ ಬೆಂಕಿ ಅವಘಡವಾಗಿದೆ. ಇದಕ್ಕೂ ಮೊದಲು, ಉತ್ತರ ಚೀನಾದ ಹೆಬೈ ಪ್ರಾಂತ್ಯದ ನರ್ಸಿಂಗ್ ಹೋಂನಲ್ಲಿ ಸಂಭವಿಸಿದ ಬೆಂಕಿ ಅಪಘಾತದಲ್ಲಿ 20 ವೃದ್ಧರು ಸಾವನ್ನಪ್ಪಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More