ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಷಿ ಜಿನ್‌ಪಿಂಗ್

Updated on: Sep 12, 2026 | 1:14 PM

ಏಳು ವರ್ಷಗಳ ಬಳಿಕ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿರುವ ಜಿನ್‌ಪಿಂಗ್, ಗ್ಯಾಲ್ವನ್ ಸಂಘರ್ಷದ ನಂತರ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಭಾರತ-ಚೀನಾ ನಡುವೆ ದ್ವಿಪಕ್ಷೀಯ ಮಾತುಕತೆ ನಿರೀಕ್ಷಿಸಲಾಗಿದ್ದು, ರಾಜತಾಂತ್ರಿಕ ಬಿಕ್ಕಟ್ಟು ಶಮನವಾಗುವ ನಿರೀಕ್ಷೆಯಿದೆ. ಚೀನಾ ಏರ್‌ಲೈನ್ಸ್ ಸೇವೆ ಪುನರಾರಂಭದ ಘೋಷಣೆಯೂ ಆಗಿದೆ.

ನವದೆಹಲಿ, ಸೆಪ್ಟೆಂಬರ್ 12: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಏಳು ವರ್ಷಗಳ ಸುದೀರ್ಘ ಅಂತರದ ನಂತರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ. 2019ರ ನಂತರ ಜಿನ್‌ಪಿಂಗ್ ಅವರ ಇದು ಮೊದಲ ಭಾರತ ಭೇಟಿಯಾಗಿದ್ದು, 2020ರಲ್ಲಿ ಗಾಲ್ವನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟ ನಂತರದ ಮೊದಲ ಭೇಟಿ ಇದಾಗಿದೆ. ಜಿನ್‌ಪಿಂಗ್ ಅವರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಗಿದ್ದು, ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ನಾಯಕರು ಅವರನ್ನು ಬರಮಾಡಿಕೊಂಡಿದ್ದಾರೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುವ ನಿರೀಕ್ಷೆಯಿದ್ದು, ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ. ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯ ಬಳಿ ಸೇನಾ ಜಮಾವಣೆಯನ್ನು ಕಡಿಮೆ ಮಾಡುವ ಕುರಿತು ಇತ್ತೀಚೆಗೆ ಸಕಾರಾತ್ಮಕ ಬೆಳವಣಿಗೆಗಳು ನಡೆದಿವೆ.

ಇದರ ಜೊತೆಗೆ, ಚೀನಾ ಸದರ್ನ್ ಏರ್‌ಲೈನ್ಸ್ ಗುವಾಂಗ್‌ಜೌ-ನವದೆಹಲಿ ನಡುವಿನ ವಿಮಾನ ಸೇವೆಗಳನ್ನು ಆರು ವರ್ಷಗಳ ನಂತರ ಪುನರಾರಂಭಿಸುವುದಾಗಿ ಘೋಷಿಸಿದೆ. ಈ ಬೆಳವಣಿಗೆಗಳು ಭಾರತ-ಚೀನಾ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಿಸುವ ನಿರೀಕ್ಷೆಯನ್ನು ಹೆಚ್ಚಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More