ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?

Edited By:

Updated on: Feb 12, 2026 | 2:04 PM

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕೆಎಸ್ಸಿಎ ಸಂಸ್ಥೆಯೂ ನ್ಯಾಯಮೂರ್ತಿ ಕುನ್ನ ವರದಿಯ ಶಿಫಾರಸುಗಳನ್ನು ಪಾಲಿಸುವ ಭರವಸೆ ನೀಡಿದೆ ಎನ್ನಲಾಗಿದೆ.

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು ನ್ಯಾಯಮೂರ್ತಿ ಕುನ್ನ ಅವರ ವರದಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಪಾಲಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 12, 2026 02:03 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More