ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು ಗೊತ್ತಾ?
ಆರ್ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪಂದ್ಯಕ್ಕೆ ದಿನಗಣನೆ ಶುರುವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಮಾಕ್ ಡ್ರಿಲ್ ನಡೆಸಲಾಗಿದೆ. ಜೂನ್ 4 ರಂದು ನಡೆದ ಕಾಲ್ತುಳಿತದಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ತಡೆಯಲು ಪೊಲೀಸ್ ಮತ್ತು ಸಿವಿಲ್ ಸಿಬ್ಬಂದಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಫೈರ್ ಎಕ್ಸಿಟ್, ಗೇಟ್ ಅಗಲೀಕರಣದಂತಹ ಕೆಲಸಗಳು ಪೂರ್ಣಗೊಂಡಿವೆ.
ಬೆಂಗಳೂರು, ಮಾರ್ಚ್ 26: ಆರ್ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನಗಳು ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮಾಕ್ ಡ್ರಿಲ್ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ. ಸಿವಿಲ್ ಇಲಾಖೆಯು ಸಹ ಈ ಮಾಕ್ ಡ್ರಿಲ್‌ನಲ್ಲಿ ಪಾಲ್ಗೊಂಡಿದ್ದು, ಪ್ರಮುಖವಾಗಿ ತರಬೇತಿಯನ್ನು ನೀಡಲಾಗಿದೆ. ಫೈರ್ ಎಕ್ಸಿಟ್ ಬಾಗಿಲುಗಳ ಪರಿಶೀಲನೆ, ಗೇಟ್‌ಗಳ ಅಗಲೀಕರಣದಂತಹ ಎಲ್ಲಾ ಅಗತ್ಯ ಕೆಲಸಗಳು ಸಂಪೂರ್ಣವಾಗಿ ಮುಗಿದಿವೆ ಎನ್ನಲಾಗಿದೆ.
ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


