ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರನವರ ಮತ್ತೊಂದು ವಿಡಿಯೋ ವೈರಲ್, ಆಗಿದ್ದೇನು?

Edited By:

Updated on: Aug 06, 2023 | 2:30 PM

ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿ ಹೊಡೆಯಿರಿ ಎಂದು ಕಾಂಗ್ರೆಸ್ ಶಾಸಕ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಚಿತ್ರದುರ್ಗ, (ಆಗಸ್ಟ್ 06): ವಿದ್ಯಾರ್ಥಿನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಥಳಿಸುವಂತೆ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದ್ದ ವಿಡಿಯೋ ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳಿಗೆ ಈ ರೀತಿ ಪ್ರಚೋದನೆ ನೀಡಿವುದು ತಪ್ಪು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ರೂಂಗೆ ಹಾಕಿ ವಾರ್ಡನ್​ಗೆ ಬಾರಿಸಿ ಎಂದಿದ್ದ ಶಾಸಕ ವೀರೇಂದ್ರ ಪಪ್ಪಿ ವಿಡಿಯೋ ವೈರಲ್

ಹಿರೇಗುಂಟನೂರಿನಲ್ಲಿ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಕೆ.ಸಿ.ವಿರೇಂದ್ರ ಪಪ್ಪಿ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಮದ್ಯ ಮಾರಾಟ ಮಾಡುವವರ ಮನೆಗೆ ಬೆಂಕಿ ಹಾಕ್ತೇವೆ ಎಂದು ಮಹಿಳೆಯರು ಹೇಳಿದ್ದಾರೆ. ಇದಕ್ಕೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಪ್ರತಿಕ್ರಿಯಿಸಿ, ನೀನು ಬೆಂಕಿ ಇಡಮ್ಮ ನಾನಿದ್ದೇನೆ, ಯಾಕೆ ಯೋಚನೆ ಮಾಡ್ತೀಯಾ ಎಂದಿದ್ದಾರೆ. ಇದೀಗ ಈ ವಿಡಿಯೋ ಸಹ ಫುಲ್ ವೈರಲ್ ಆಗಿದೆ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More