AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಪೊಲೀಸ್​ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Nov 23, 2025 | 10:10 PM

Share

ಚಿತ್ರದುರ್ಗದಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ನೆಪದಲ್ಲಿ ಪೊಲೀಸ್ ಪೇದೆಯೊಬ್ಬರು ಆಟೋ ಚಾಲಕನಿಗೆ ಹಲ್ಲೆ ನಡೆಸಿ, ವಾಹನ ಜಪ್ತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಟೋ ಚಾಲಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಕಾರಣರಾದ ಪೊಲೀಸರ ಅಮಾನತು, ಚಾಲಕನ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಚಿತ್ರದುರ್ಗ, ನವೆಂಬರ್ 23: ಪೊಲೀಸರ ಕಿರುಕುಳದಿಂದ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ ಕೇಸ್​​ಗೆ ಸಂಬಂಧಿಸಿದಂತೆ ನಗರದಲ್ಲಿ ಆಟೋ ಚಾಲಕರಿಂದ ಪ್ರತಿಭಟನೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಆಟೋ ಚಾಲಕ ಸಂಘದ ಸದಸ್ಯ, ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಅಮಾಯಕ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಬಾಯಿಗೆ ಬಂದಂತೆ ಬೈದು, ಗಾಂಧಿ ವೃತ್ತದಲ್ಲಿ ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆಗೆ ಕಾರಣರಾದ ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More