ಪೊಲೀಸ್ ಕಿರುಕುಳಕ್ಕೆ ಆಟೋ ಡ್ರೈವರ್ ಆತ್ಮಹತ್ಯೆಗೆ ಯತ್ನ: ಸಿಡಿದೆದ್ದ ಆಟೋ ಚಾಲಕರು
ಚಿತ್ರದುರ್ಗದಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ನೆಪದಲ್ಲಿ ಪೊಲೀಸ್ ಪೇದೆಯೊಬ್ಬರು ಆಟೋ ಚಾಲಕನಿಗೆ ಹಲ್ಲೆ ನಡೆಸಿ, ವಾಹನ ಜಪ್ತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಆಟೋ ಚಾಲಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಕಾರಣರಾದ ಪೊಲೀಸರ ಅಮಾನತು, ಚಾಲಕನ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಚಿತ್ರದುರ್ಗ, ನವೆಂಬರ್ 23: ಪೊಲೀಸರ ಕಿರುಕುಳದಿಂದ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ ಕೇಸ್ಗೆ ಸಂಬಂಧಿಸಿದಂತೆ ನಗರದಲ್ಲಿ ಆಟೋ ಚಾಲಕರಿಂದ ಪ್ರತಿಭಟನೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಆಟೋ ಚಾಲಕ ಸಂಘದ ಸದಸ್ಯ, ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಅಮಾಯಕ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಬಾಯಿಗೆ ಬಂದಂತೆ ಬೈದು, ಗಾಂಧಿ ವೃತ್ತದಲ್ಲಿ ಎಳೆದಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆಗೆ ಕಾರಣರಾದ ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
