ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಬಂದ್; ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗ ಬಂದ್ಗೆ ಕರೆ ಕೊಡಲಾಗಿದೆ. ಇಂದು ಬೆಳಗ್ಗೆ 6:30ರಿಂದ ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಚಿತ್ರದುರ್ಗ, ಜ.23: ಇಂದು ಚಿತ್ರದುರ್ಗ ಜಿಲ್ಲೆ ಸ್ವಯಂಪ್ರೇರಿತ ಬಂದ್ಗೆ (Chitradurga Bandh) ಕರೆ ಕೊಟ್ಟಿದೆ. ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನೇತೃತ್ವದಲ್ಲಿ ಬಂದ್ಗೆ ಕರೆ ಕೊಡಲಾಗಿದೆ. ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಇಂದು ಬೆಳಗ್ಗೆ 6:30ರಿಂದ ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರತಿಭಟನೆ ಹಿನ್ನೆಲೆ ರೈತ ಮುಖಂಡರು ಜಮಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಆಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Latest Videos