AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:May 09, 2026 | 4:38 PM

Share

ಮಾಜಿ ಸಿಎಂ ಬಿಎಸ್. ಯಡಿಯೂರಪ್ಪ ಅವರು ಐದು ದಶಕಗಳ ಕಾಲ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸವಲತ್ತುಗಳು ತಲುಪಬೇಕು ಎಂಬ ಉದ್ದೇಶದಿಂದ ಶ್ರಮಿಸಿದ್ದಾರೆ. ಅವರ ಜನಸೇವೆ ಅನೇಕರಿಗೆ ಪ್ರೇರಣೆಯಾಗಿದೆ. ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದಲೂ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ. ಇನ್ನೂ ಕಾರ್ಯಕ್ರಮಕ್ಕೆ ಬರುವ ಅಭಿಮಾನಿಗಳಿಗೆ ಉಪಹಾರ ವ್ಯವಸ್ಥೆ ಕೂಡ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: May 09, 2026 04:38 PM
Follow Us