ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ
ಸೀಬರ್ಡ್ ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಮಹ್ಮದ್ ರಫೀಕ್ ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೂವರು ಮಕ್ಕಳನ್ನು ಹೊಂದಿದ್ದ ರಫೀಕ್ ಕುಟುಂಬದವರ ಎಲ್ಲರ ದುಡಿಮೆಯ ಆಧಾರವಾಗಿದ್ದರು. ಇದೀಗ ಅವರ ಕುಟುಂಬದವರು ಟಿವಿ9 ಜತೆ ಅಳಲು ತೋಡಿಕೊಂಡಿದ್ದಾರೆ.
ಚಿತ್ರದುರ್ಗ, ಹುಬ್ಬಳ್ಳಿ, ಡಿಸೆಂಬರ್ 26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಸ್ ಚಾಲಕ ಮಹ್ಮದ್ ರಫೀಕ್ (38) ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹುಲಗೂರು ಮೂಲದ ರಫೀಕ್ ಕುಟುಂಬದವರಿಗೆ ಆಧಾರವಾಗಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
