AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 25, 2025 | 10:36 AM

Share

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿಯಾಗಿ ಸ್ಲೀಪರ್ ಕೋಚ್ ಬಸ್ ಬೆಂಕಿ ಹೊತ್ತಿಕೊಂಡ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಪಕ್ಕದಲ್ಲೇ ಸಾಗುತ್ತಿದ್ದ ಶಾಲಾ ಮಕ್ಕಳ ಬಸ್ ಚಾಲಕ ಸಚಿನ್, ಘಟನೆಯ ವಿವರಣೆ ನೀಡಿದ್ದಾರೆ.

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ, ಪಕ್ಕದಲ್ಲೇ ಶಾಲೆ ಮಕ್ಕಳ ಪ್ರವಾಸಕ್ಕೆ ಹೊರಟಿದ್ದ ಬಸ್ಸಿನ ಚಾಲಕ ಸಚಿನ್ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ.

‘ಟಿವಿ9’ ಜೊತೆ ಮಾತನಾಡಿರುವ ಸಚಿನ್, ಸುಮಾರು ಎರಡು ಗಂಟೆ ಸುಮಾರಿಗೆ ಲಾರಿಯೊಂದು ಡಿವೈಡರ್ ಹಾರಿ ಬಂದು ಸ್ಲೀಪರ್ ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟವೂ ಸಂಭವಿಸಿತು. ಶಾಲಾ ಬಸ್ಸನ್ನು ಪಕ್ಕಕ್ಕೆ ಸರಿಸಿ ಅಪಘಾತಕ್ಕೀಡಾದ ಬಸ್ಸಿನಲ್ಲಿದ್ದ 7 ಜನರ ರಕ್ಷಣೆಗೆ ಮುಂದಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ತಮ್ಮ ಬಸ್‌ಗೆ ಸ್ವಲ್ಪ ಹಾನಿಯಾಗಿದ್ದರೂ, ಅದೃಷ್ಟವಶಾತ್ ಮಕ್ಕಳಾಗಲೀ, ಶಿಕ್ಷಕರಾಗಲೀ ಯಾರಿಗೂ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ಶಿರಾ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ