AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಿತ್ರದುರ್ಗ ಬಸ್ ದುರಂತ: ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ, 42 ಶಾಲಾ ಮಕ್ಕಳು ಪವಾಡಸದೃಶ ಪಾರು

Video: ಚಿತ್ರದುರ್ಗ ಬಸ್ ದುರಂತ: ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ, 42 ಶಾಲಾ ಮಕ್ಕಳು ಪವಾಡಸದೃಶ ಪಾರು

ಅಕ್ಷಯ್​ ಪಲ್ಲಮಜಲು​​
|

Updated on: Dec 25, 2025 | 9:47 AM

Share

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್-ಲಾರಿ ಅಪಘಾತದಲ್ಲಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಸಮಾನಾಂತರವಾಗಿ ಸಾಗುತ್ತಿದ್ದ ಶಾಲಾ ಮಕ್ಕಳ ಬಸ್ಸು ಡಿಕ್ಕಿಯ ಹೊರತಾಗಿಯೂ ಅದೃಷ್ಟವಶಾತ್ 42 ಮಕ್ಕಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಪೊಲೀಸರು ಮೃತರ ಗುರುತಿಸುವಿಕೆ ಮತ್ತು ತನಿಖೆ ನಡೆಸುತ್ತಿದ್ದಾರೆ.

ಚಿತ್ರದುರ್ಗ, ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಅಪಘಾತ ನಡೆದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ 9 ಮಂದಿ ಮೃತಪಟ್ಟಿರುವುದಾಗಿ ಪ್ರಾಥಮಿಕ ವರದಿಯು ತಿಳಿಸಿದೆ. ಅಪಘಾತದ ಸಂದರ್ಭದಲ್ಲಿ, ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಬಸ್‌ನ ಹಿಂದೆ ಇದ್ದ ದಾಂಡೇಲಿಗೆ ತೆರಳುತ್ತಿದ್ದ 42 ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಕೂಡ ಬೆಂಕಿ ಹತ್ತಿದೆ. ಇದರ ಪರಿಣಾಮ ಶಾಲಾ ಬಸ್ಸು ರಾಷ್ಟ್ರೀಯ ಹೆದ್ದಾರಿಯ ಬೇಲಿಯನ್ನು ಕಿತ್ತು ಚರಂಡಿ ದಾಟಿ ಆ ಕಡೆಗೆ ಹೋಗಿ ನಿಂತಿದೆ. ಅದೃಷ್ಟವಶಾತ್, ಬಸ್ಸಿನಲ್ಲಿದ್ದ 42 ಮಕ್ಕಳಲ್ಲಿ ಒಬ್ಬರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಕ್ಕಳಿದ್ದ ಬಸ್ಸಿನ ಚಾಲಕ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಅವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ, ಅಪಘಾತದ ತನಿಖೆ ನಡೆಯುತ್ತಿದ್ದು, ಮೃತದೇಹಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಮೃತಪಟ್ಟ ಪ್ರಯಾಣಿಕರು ಡಿಜಿಟಲ್ ಮೂಲಕ ಟಿಕೆಟ್ ಕಾಯ್ದಿರಿಸಿದ್ದರಿಂದ, ಅವರ ದೂರವಾಣಿ ಸಂಖ್ಯೆಗಳನ್ನು ಬಳಸಿ ಸಂಬಂಧಿಕರನ್ನು ಸಂಪರ್ಕಿಸುವ ಪ್ರಯತ್ನದಲ್ಲಿ ಪೊಲೀಸ್ ಅಧಿಕಾರಿಗಳು ನಿರತರಾಗಿದ್ದಾರೆ. ಅಪಘಾತಕ್ಕೆ ಕಾರಣವೇನು ಮತ್ತು ಅದು ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ