ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಕರುಳು ಹಿಂಡುವಂತಿದೆ ಪೋಷಕರ ಗೋಳಾಟ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ದುರಂತ ಸಂಭವಿಸಿ ಐವರು ಸಜೀವ ದಹನವಾಗಿದ್ದಾರೆ. ಲಾರಿ ಡಿಕ್ಕಿಯಿಂದಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಮಕ್ಕಳ ಮಿಸ್ಸಿಂಗ್ನಿಂದ ಕುಟುಂಬ ಕಂಗಾಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಿತ್ರದುರ್ಗ, ಡಿಸೆಂಬರ್ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಬಸ್ ಹೊತ್ತಿ ಉರಿದ ಪರಿಣಾಮ ಐವರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ಘಟನೆ ಬಳಿಕ ಮೂವರು ನಾಪತ್ತೆಯಾಗಿದ್ದು, ಆ ಪೈಕಿ ಈಗ ಒಬ್ಬರ ಪತ್ತೆಯಾಗಿದೆ. ಉಳಿದ ಇಬ್ಬರು ಯುವತಿಯರು ಇನ್ನೂ ಮಿಸ್ಸಿಂಗ್ ಹಿನ್ನೆಲೆ
ಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ, ತಮ್ಮ ಮಕ್ಕಳನ್ನು ಹುಡುಕುತ್ತಾ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
