Chitradurga: ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ, ಗೊತ್ತಿದ್ರೂ ಈಜಾಟ

Edited By:

Updated on: May 23, 2026 | 9:25 AM

ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ.

ಚಿತ್ರದುರ್ಗ, ಮೇ 23: ಚಿತ್ರದುರ್ಗದ ಏಳು ಸುತ್ತಿನ ಕೋಟೆಯ ಸಮೀಪದ ಹೊಂಡ ಯುವಕರ ನೆಚ್ಚಿನ ಈಜುವ ತಾಣವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಈ ಹೊಂಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಸೃಷ್ಟಿಸಿದೆ. ಮೊಸಳೆ ಅಪಾಯದ ಬಗ್ಗೆ ಎಚ್ಚರಿಕೆ ಫಲಕಗಳಿದ್ದರೂ ಯುವಕರು ಜೀವದ ಹಂಗು ತೊರೆದು ಈಜಾಡುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಸ್ಥಳಾಂತರಕ್ಕೆ ಆಗ್ರಹಿಸಿದ್ದಾರೆ.

ಈ ಅಪಾಯಕಾರಿ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಭಯಗೊಂಡಿದ್ದಾರೆ. ಹೊಂಡದಲ್ಲಿ ಮೊಸಳೆ ಇರುವುದು ತಿಳಿದಿದ್ದರೂ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಂದಾಗಬಹುದಾದ ಅನಾಹುತಗಳನ್ನು ತಡೆಗಟ್ಟಲು ಕೂಡಲೇ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ನಾಗರಿಕರು ಮತ್ತು ಹಿತರಕ್ಷಣಾ ವೇದಿಕೆಗಳು ಆಗ್ರಹಿಸಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us