ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ; 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!

Edited By:

Updated on: Apr 19, 2026 | 11:08 AM

ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳವು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಹಶೀಲ್ದಾರ್ ರೇಹಾನ್ ಪಾಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ, ಏಪ್ರಿಲ್ 19: ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳವು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಹಶೀಲ್ದಾರ್ ರೇಹಾನ್ ಪಾಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More