AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 22, 2025 | 10:16 AM

Share

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ ನಾಲ್ಕು ನಿವಾಸಗಳ ಮೇಲೆ ಚಳ್ಳಕೆರೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಖಾಸಗಿ ಕಾರುಗಳಲ್ಲಿ ಬಂದ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇತ್ತೀಚೆಗಷ್ಟೇ ರಾಜ್ಯದ ಇತರ ಕೆಲವು ಕಡೆಗಳಲ್ಲಿಯೂ ಇಡಿ ದಾಳಿ ನಡೆದಿತ್ತು.

ಚಿತ್ರದುರ್ಗ, ಆಗಸ್ಟ್ 22: ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರಗೆ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ.

ಸದ್ಯ ಶಾಸಕ ಕೆಸಿ ವಿರೇಂದ್ರ ಹೊರರಾಜ್ಯದಲ್ಲಿದ್ದಾರೆ. ಇದೀಗ ಇಡಿ ದಾಳಿಯಿಂದ 2016 ರ ಐಟಿ ದಾಳಿ ವೇಳೆ ಪತ್ತೆಯಾದಂತೆ ಮತ್ತೊಂದು ಅಕ್ರಮ ಬಯಲಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 22, 2025 08:07 AM
Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More