ಚಿತ್ರದುರ್ಗದ ಗೂಡಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ಸ್ಥಳೀಯರ ಆಕ್ರೋಶ

Updated on: Nov 11, 2025 | 2:50 PM

ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಒಂದು ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಸ್ಥಳೀಯರು ಆ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ, ನವೆಂಬರ್ 11: ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಒಂದು ಗೂಡಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಸ್ಥಳೀಯರು ಆ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ತಮ್ಮ ಆಕ್ರೋಶ ಹರಹಾಕಿದ್ದಾರೆ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಕ್ಷಣ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಲು ಹಾಗೂ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವಂತೆ ಸ್ಥಳೀಯರು ಪೊಲೀಸರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More