ಜಮೀರ್ ಆವಾಜ್ಗೆ ನಡುಗಿದ ಬಾಲಕಿಯರ ಹಾಸ್ಟೆಲ್
ಚಿತ್ರದುರ್ಗ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಗುರುವಾರ (ಮೇ 23) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ, ಮೇ 24: ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ (Minority Hostel) ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ (Zameer Ahmed) ಗುರುವಾರ (ಮೇ 23) ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಸತಿ ನಿಲಯದಲ್ಲಿನ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿನಿಯರಿಂದ ದೂರು ಆಲಿಸಿದರು. ಕಳಪೆ ಆಹಾರ ನೀಡುತ್ತಿದ್ದಾರೆ. ವಾರಕ್ಕೊಮ್ಮೆಯೂ ಬಿರಿಯಾನಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯರು ದೂರು ನೀಡಿದರು. ವಿದ್ಯಾರ್ಥಿನಿಯರ ದೂರು ಆಲಿಸಿದ ಸಚಿವ ಜಮೀರ್ ಅಹ್ಮದ್ ವಾರ್ಡನ್ ಶಿಲ್ಪಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅಮಾನತು ಮಾಡುವುದಾಗಿ ಎಚ್ಚರಿಕೆ ನೀಡಿದರು. ಜಮೀರ್ ಅಹ್ಮದ್ ಮೇ 23 ರಂದು ಖಾಸಗಿ ಕಾರ್ಯಕ್ರಮಕ್ಕೆ ಚಿತ್ರದುರ್ಗಕ್ಕೆ ತೆರಳಿದ್ದರು. ರಾತ್ರಿ ವಾಪಸಾಗುವ ವೇಳೆ ವಸತಿ ನಿಲಯಕ್ಕೆ ಭೇಟಿ ನೀಡಿದರು. ಸಚಿವ ಜಮೀರ್ಗೆ ಸ್ಥಳೀಯ ಶಾಸಕ ಕೆಸಿ ವಿರೇಂದ್ರ ಸಾಥ್ ನೀಡಿದರು.