ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಭರದ ಸಿದ್ಧತೆ: ಕೋಟೆನಾಡು ಕೇಸರಿಮಯ

Updated on: Oct 02, 2026 | 3:41 PM

ಚಿತ್ರದುರ್ಗದಲ್ಲಿ ಅಕ್ಟೋಬರ್ 3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಳೆದ 20 ವರ್ಷಗಳಿಂದ ಈ ಉತ್ಸವ ಆಯೋಜಿಸುತ್ತಿವೆ. ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದ್ದು, ನಗರವನ್ನು ಕೇಸರಿಮಯವಾಗಿ ಅಲಂಕರಿಸಲಾಗಿದೆ. ಸುಗಮ ಸಂಚಾರ ಹಾಗೂ ಭದ್ರತೆಗಾಗಿ ಜಿಲ್ಲಾಡಳಿತ ವ್ಯಾಪಕ ಸಿದ್ಧತೆ ಕೈಗೊಂಡಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಅಕ್ಟೋಬರ್ 3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಾಗೂ ವಿಸರ್ಜನೆ ನಡೆಯಲಿದ್ದು, ಸಿದ್ಧತೆಗಳು ಅಂತಿಮಗೊಂಡಿವೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಳೆದ 20 ವರ್ಷಗಳಿಂದ ಈ ಮಹಾಗಣಪತಿ ಉತ್ಸವವನ್ನು ಆಯೋಜಿಸುತ್ತಿದ್ದು, ಈ ವರ್ಷ ಜಯದೇವ ಕ್ರೀಡಾಂಗಣದಲ್ಲಿ ಸುವರ್ಣಗಿರಿ ಮಾದರಿಯ ವಿಷ್ಣು ಅವತಾರದ ಬೃಹತ್ ಗಣೇಶನ ವಿಗ್ರಹ ಪ್ರತಿಷ್ಠಾಪಿಸಲಾಗಿದೆ. ಉತ್ಸವಕ್ಕಾಗಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿ ಕಂಗೊಳಿಸುತ್ತಿದ್ದು, ವೃತ್ತಗಳಲ್ಲಿ ವಿಶೇಷ ಅಲಂಕಾರ ಹಾಗೂ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ವಿವಿಧ ಸಂಘ ಸಂಸ್ಥೆಗಳು ನೀರು ಮತ್ತು ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಿಕೊಂಡಿವೆ.

ಶೋಭಾಯಾತ್ರೆಯು ಚಳ್ಳಕೆರೆ ಗೇಟ್‌ನಿಂದ ಚಂದ್ರವಳ್ಳಿಯವರೆಗೆ ಸಾಗಲಿದ್ದು, ಜನಪದ ಕಲಾತಂಡಗಳು ಮತ್ತು ವಿಶೇಷ ಸಂಗೀತ ವ್ಯವಸ್ಥೆ ಇರಲಿದೆ. ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ, ಎಸ್ಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ 4,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಕ್ಟೋಬರ್ 3ರಂದು ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Oct 02, 2026 03:39 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More