AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: 7-8 ಕಿ.ಮೀ ನಡಿಗೆ, ಚಿರತೆ-ಕರಡಿಗಳ ಭಯ; ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು

ಚಿತ್ರದುರ್ಗ: 7-8 ಕಿ.ಮೀ ನಡಿಗೆ, ಚಿರತೆ-ಕರಡಿಗಳ ಭಯ; ಬಸ್‌ಗಾಗಿ ಬೇಡಿಕೆಯಿಟ್ಟ 140 ವಿದ್ಯಾರ್ಥಿಗಳು

ಬಸವರಾಜ ಮುದನೂರ್
| Edited By: |

Updated on:Sep 16, 2026 | 12:47 PM

Share

ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದ ಶಾಲಾ ಮಕ್ಕಳು ಸಾರಿಗೆ ವ್ಯವಸ್ಥೆ ಇಲ್ಲದೆ ಪ್ರತಿದಿನ 7-8 ಕಿ.ಮೀ. ನಡೆಯುವ ದುಸ್ಥಿತಿಯಲ್ಲಿದ್ದಾರೆ. ಕಾಡು ಪ್ರಾಣಿಗಳು, ಹಾವು-ಚೇಳುಗಳ ಭೀತಿಯ ಜೊತೆಗೆ ಹೆಣ್ಣು ಮಕ್ಕಳ ಸುರಕ್ಷತೆಯೂ ಪ್ರಶ್ನಾರ್ಥಕವಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು, ಪೋಷಕರ ಆತಂಕ ಹೆಚ್ಚಿದೆ.

ಚಿತ್ರದುರ್ಗ, ಸೆ.16: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದ ಬಳಿಯ ಸರ್ಕಾರಿ ಪ್ರೌಢಶಾಲೆಗೆ ಸುತ್ತಮುತ್ತಲಿನ ಒಂಬತ್ತು ಹಳ್ಳಿಗಳಿಂದ ಸುಮಾರು 140 ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ಲಭ್ಯವಿದ್ದರೂ, ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದಾಗಿ ಮಕ್ಕಳು ಪ್ರತಿದಿನ 7-8 ಕಿಲೋಮೀಟರ್ ದೂರ ನಡೆದುಕೊಂಡೇ ಶಾಲೆಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಏಕೈಕ ಬಸ್ ಸಹ ಶಾಲಾ ಸಮಯಕ್ಕೆ ಬರುವುದಿಲ್ಲ. ಸಂಜೆ ಮನೆಗೆ ಮರಳುವಾಗ ಕತ್ತಲಾಗಿದ್ದು, ಕಾಡುಪ್ರಾಣಿಗಳಾದ ಚಿರತೆ, ಕರಡಿ ಹಾಗೂ ಹಾವು-ಚೇಳುಗಳ ಭೀತಿ ಮಕ್ಕಳನ್ನು ಕಾಡುತ್ತಿದೆ. ವಿಶೇಷವಾಗಿ ಪ್ರೌಢಾವಸ್ಥೆಯ ವಿದ್ಯಾರ್ಥಿನಿಯರ ಸುರಕ್ಷತೆ ಬಗ್ಗೆ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಪೋಷಕರು ತಮ್ಮ ಮಕ್ಕಳ ಸುರಕ್ಷತೆಗಾಗಿ ಪ್ರತಿದಿನವೂ ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಹೊಳಲ್ಕೆರೆ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಸಹಾಯಕರಾದ ಪೋಷಕರು ಮತ್ತು ವಿದ್ಯಾರ್ಥಿಗಳು ಬಸ್ ತಡೆ, ರಸ್ತೆ ತಡೆ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಮೂಲಕ ಮಕ್ಕಳ ಶಿಕ್ಷಣ ಹಾಗೂ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 16, 2026 12:16 PM

Follow Us
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More