ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

Edited By:

Updated on: Mar 15, 2026 | 9:18 PM

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿದ್ದ ಇವರಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More