ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?

Edited By:

Updated on: Aug 14, 2026 | 10:43 PM

ಚಿತ್ರದುರ್ಗದ ಮಂಕಿ ಮ್ಯಾನ್ ಜ್ಯೋತಿರಾಜ್ ಅವರ ವಿವಾಹ ನಿವೇದಿತಾ ಅವರೊಂದಿಗೆ ಆಗಸ್ಟ್ 22 ಮತ್ತು 23ರಂದು ನೆರವೇರಲಿದೆ. ಇದು ಪ್ರೀತಿ ಮತ್ತು ಅರೇಂಜ್ ಮದುವೆಯ ಮಿಶ್ರಣವಾಗಿದ್ದು, ವಧು ಚಿಕ್ಕಂದಿನಿಂದಲೇ ಜ್ಯೋತಿರಾಜ್ ಅವರೊಂದಿಗೆ ಪರಿಚಿತರಾಗಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲೂ ನಿರತರಾಗಿರುವ ಜ್ಯೋತಿರಾಜ್‌ಗೆ ವಧು ಸಂಪೂರ್ಣ ಬೆಂಬಲ ನೀಡಲಿದ್ದಾರೆ.

ಚಿತ್ರದುರ್ಗ, ಆಗಸ್ಟ್​​ 14: ಕರ್ನಾಟಕದ ‘ಸ್ಪೈಡರ್‌ಮ್ಯಾನ್’ ಎಂದೇ ಜನಪ್ರಿಯರಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರ ವಿವಾಹ ಮುಹೂರ್ತ ನಿಶ್ಚಯವಾಗಿದ್ದು, ಚಿತ್ರದುರ್ಗ ಸಮೀಪದ ಚಳ್ಳಕೆರೆಯ ದೊಡ್ಡಉಳ್ಳಾರ್ತಿ ಗ್ರಾಮದ ನಿವೇದಿತಾ ಎಂಬುವವರೊಂದಿಗೆ ಆಗಸ್ಟ್ 22 ಮತ್ತು 23ರಂದು ವೈಭವ ಗಾರ್ಡನ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿಂದೆ 2018-19ರಲ್ಲಿ ಜೋಗ್‌ಫಾಲ್ಸ್‌ನಲ್ಲಿ ಬಿದ್ದು ಗಾಯಗೊಂಡಿದ್ದ ಸಂದರ್ಭದಲ್ಲಿ ನಿಶ್ಚಯವಾಗಿದ್ದ ಮದುವೆ ರದ್ದಾಗಿತ್ತು. ಇದೀಗ ಬಾಲ್ಯದಿಂದಲೂ ಪರಿಚಿತವಿರುವ ನಿವೇದಿತಾರನ್ನು ಇಷ್ಟಪಟ್ಟು ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಅರೇಂಜ್ಡ್-ಕಮ್-ಲವ್ ಮ್ಯಾರೇಜ್ ಆಗುತ್ತಿರುವುದಾಗಿ ಜ್ಯೋತಿರಾಜ್ ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಸ್ನೇಹಿತರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳ ಪ್ರೀತಿ-ಬೆಂಬಲದಿಂದ ಸರಳವಾಗಿ ವಿವಾಹ ಕಾರ್ಯಕ್ರಮ ನೆರವೇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More