ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 5:57 PM

ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿವೆಯಾದರೂ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಜೆಡಿಸ್ ಪಕ್ಷದ ದೊಡ್ಡಪಾತ್ರವೇನೂ ಇಲ್ಲ, ಅದರೂ ಎಲ್ಲ ಕ್ಷೇತ್ರಗಳಲ್ಲಿನ ಪಕ್ಷದ ಮುಖಂಡರನ್ನು ನಾಳೆ ನಡೆಯುವ ಸಭೆಗೆ ಕರೆಯಲಾಗಿದೆ, ಚುನಾವಣಾ ತಂತ್ರಗಾರಿಕೆಯನ್ನು ಸಭೆಯಲ್ಲಿ ಹೆಣೆಯಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ರಾಮನಗರ: ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್​ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ. ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು ದುಡುಕಿನ ನಿರ್ಧಾರವನ್ನೇನೂ ತೆಗೆದುಕೊಳ್ಳಲ್ಲ, ರಾಜ್ಯ ರಾಜಕೀಯಕ್ಕೆ ಒಳಿತಾಗುವ ತೀರ್ಮಾನ ತೆಗೆದುಕೊಳ್ಳೋದಾಗಿ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬೆಂಗಳೂರು ಅಭಿವೃದ್ಧಿಗೆ ಸುಂದರ ಹೆಸರು ನೀಡೋದು ಬಿಟ್ಟರೆ ಶಿವಕುಮಾರ್ ಏನೂ ಮಾಡಿಲ್ಲ: ಕುಮಾರಸ್ವಾಮಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.