Who would be CM? ಮುಖ್ಯಮಂತ್ರಿ ವಿಚಾರ ಇನ್ನೂ ಕಗ್ಗಂಟು, ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿದ ಕೆಸಿ ವೇಣುಗೋಪಾಲ್

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2023 | 11:45 AM

ವೇಣುಗೋಪಾಲ್ ಕಾಂಗ್ರೆಸ್ ಮಾಜಿ ಅಧ್ಯಕ್ಷೆಯ ನಿವಾಸ ಪ್ರವೇಶಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ದೆಹಲಿ: ರಾಜ್ಯದ ಮುಖ್ಯಮಂತ್ರಿ ಯಾರು ಅನ್ನೋದು ಇನ್ನೂ ಕಗ್ಗಂಟಾಗೇ ಉಳಿದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಿನ್ನೆ ಹಲವು ಸಭೆಗಳನ್ನು ನಡೆಸಿ ದಾವೇದಾರರಾಗಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರೂ ನಿರ್ಣಯ ತೆಗೆದುಕೊಳ್ಳುವುದು ಸಾಧ್ಯವಾಗಿಲ್ಲ. ಹಾಗಾಗೇ, ಖರ್ಗೆ ಅವರು ಅಂತಿಮ ನಿರ್ಣಯವನ್ನು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರಿಗೆ (Sonia Gandhi) ಬಿಟ್ಟುಕೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಅವರು ಸೋನಿಯಾ ಗಾಂಧಿ ನಿವಾಸಕ್ಕೆ ಅಗಮಿಸಿದರು. ವೇಣುಗೋಪಾಲ್ ಕಾಂಗ್ರೆಸ್ ಮಾಜಿ ಅಧ್ಯಕ್ಷೆಯ ನಿವಾಸ ಪ್ರವೇಶಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Published on: May 17, 2023 11:44 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.