AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ದೇವೇಗೌಡರು ಪಯಣಿಸುತ್ತಿದ್ದ ಹೆಲಿಕಾಪ್ಟರ್​ಗೂ ಎದುರಾಯ್ತು ತೊಂದರೆ, ಹಾಸನದ ಸಕಲೇಶಪುರದಲ್ಲಿ ಘಟನೆ

Karnataka Assembly Polls: ದೇವೇಗೌಡರು ಪಯಣಿಸುತ್ತಿದ್ದ ಹೆಲಿಕಾಪ್ಟರ್​ಗೂ ಎದುರಾಯ್ತು ತೊಂದರೆ, ಹಾಸನದ ಸಕಲೇಶಪುರದಲ್ಲಿ ಘಟನೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 04, 2023 | 6:10 PM

Share

ರಾಜಕಾರಣಿಗಳು ಪಯಣಿಸುವ ಹೆಲಿಕಾಪ್ಟರ್​ಗಳಿಗೆ ಸಮಸ್ಯೆ ಎದುರಾಗುತ್ತಿರುವುದು ಬೆಂಬಲಿಗರಲ್ಲಿ ಆತಂಕ ಮೂಡಿಸುತ್ತಿದೆ

ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು (HD Devegowda) ತೆರಳುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ಸಮಸ್ಯೆ (technical snag)ತಲೆದೋರಿದ್ದರಿಂದ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಪೈಲಟ್ ದೋಷ ಸರಿಪಡಿಸಿದ ಬಳಿಕ ಅದು ತನ್ನ ಗಮ್ಯದತ್ತ ತೆರಳಿತು. ಜಿಲ್ಲೆಯ ಸಕಲೇಶಪುರದ (Sakleshpura) ತಾಲ್ಲೂಕು ಕ್ರೀಡಾಂಗಣದಲ್ಲಿ ಘಟನೆ ನಡೆಯಿತು. ಸಕಲೇಶಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿ ಪರ ಸಿ.ಎಂ.ಇಬ್ರಾಹಿಂ ಜೊತೆ ಮತಯಾಚಿಸಿದ ದೇವೇಗೌಡರು ಅರಕಲಗೂಡು ಕಡೆ ತೆರಳುತ್ತಿದ್ದಾಗ ಘಟನೆ ಸಂಭವಿಸಿತು. ರಾಜಕಾರಣಿಗಳು ಪಯಣಿಸುವ ಹೆಲಿಕಾಪ್ಟರ್​ಗಳಿಗೆ ಸಮಸ್ಯೆ ಎದುರಾಗುತ್ತಿರುವುದು ಬೆಂಬಲಿಗರಲ್ಲಿ ಆತಂಕ ಮೂಡಿಸುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.