AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ನಮ್ಮ ಪ್ರತಿಭಟನೆ: ಅಭಿಜಿತ್ ದೀಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ನಮ್ಮ ಪ್ರತಿಭಟನೆ: ಅಭಿಜಿತ್ ದೀಪ್ಕೆ

ನಯನಾ ರಾಜೀವ್
|

Updated on: Jul 23, 2026 | 12:27 PM

Share

ನೀಟ್ ಪರೀಕ್ಷಾ ಅಕ್ರಮದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರಬಲವಾಗಿ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರ ಹಿತಾಸಕ್ತಿ ಕಾಪಾಡುವ ಕುರಿತು ಟ್ವೀಟ್ ಮಾಡಿದ ಬೆನ್ನಲ್ಲೇ, ಸಿಜೆಪಿ ಪ್ರಧಾನಿ ಮೋದಿ ಅವರ ಟ್ವೀಟ್‌ಗೆ ತಿರುಗೇಟು ನೀಡಿದೆ. ಮೊದಲು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ನವದೆಹಲಿ, ಜುಲೈ 23: ನೀಟ್ ಪರೀಕ್ಷಾ ಅಕ್ರಮದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರಬಲವಾಗಿ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರ ಹಿತಾಸಕ್ತಿ ಕಾಪಾಡುವ ಕುರಿತು ಟ್ವೀಟ್ ಮಾಡಿದ ಬೆನ್ನಲ್ಲೇ, ಸಿಜೆಪಿ ಪ್ರಧಾನಿ ಮೋದಿ ಅವರ ಟ್ವೀಟ್‌ಗೆ ತಿರುಗೇಟು ನೀಡಿದೆ. ಮೊದಲು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಸಿಜೆಪಿಯ ಸ್ಥಾಪಕ ಅಭಿಜೀತ್ ದೀಪ್ಕೆ ಅವರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ತಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟ ಆರಂಭದಿಂದಲೂ ಶಿಕ್ಷಣ ಸಚಿವರ ರಾಜೀನಾಮೆಯನ್ನೇ ಮುಖ್ಯ ಬೇಡಿಕೆಯಾಗಿ ಇಟ್ಟುಕೊಂಡಿದೆ. ನೀಟ್ ಅಕ್ರಮ ವಿಚಾರ ದಿನದಿಂದ ದಿನಕ್ಕೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದು, ಪ್ರತಿಭಟನೆಯು ಮತ್ತಷ್ಟು ಉಗ್ರ ರೂಪ ಪಡೆದುಕೊಂಡಿದೆ.

ನೀಟ್ ವಿಚಾರವು ದಿನದಿಂದ ದಿನಕ್ಕೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದು, ಈ ಹೋರಾಟದ ದಿಕ್ಕು ದಾರಿ ತಪ್ಪುತ್ತಿದೆಯೇ ಎಂಬ ಮಾತುಗಳೂ ಕೇಳಿಬರುತ್ತಿವೆ. ಸಂಜೆ ವೇಳೆಗೆ ಪ್ರತಿಭಟನೆ ವೇಳೆ ಸಂಘರ್ಷಗಳು ಹೆಚ್ಚಾಗುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us